Miscellaneous Messages Short Text Messages

"ಭಗವತ್ ಗೀತೆ ನುಡಿ "

ಹುಟ್ಟಿದಾಗ ನೀ ಅಳುತ್ತಿದ್ದೆ,

ಮಡಿದಾಗ ನಿನ್ನವರು ಅಳುತ್ತಿದ್ದರು.

ಹುಟ್ಟಿದಾಗ ನಿನಗೆ ವಸ್ತ್ರ ತೊಡಿಸುವರು,

ಮಡಿದಾಗ ನಿನ್ನ ವಸ್ತ್ರವ ಬಿಚ್ಚುವರು.

ಹುಟ್ಟಿದಾಗ ಹುಡುಕುವರು ನಿನಗೆ ನೂರೆಂಟು ನಾಮ,

ಮಡಿದಮೇಲೆ ಶವ ಎಂದೇ ನಿನ್ನ ನಾಮ.

ನೀನೇನನ್ನೂ ಗಳಿಸದೇ ಬಂದೆ,

ಮಡಿದಾಗ ನೀನು ಗಳಸಿದ್ದನ್ನು ಕಳದುಕೊಂಡೆ.

ಓ ಮಾನವಾ..

ಮಡಿದಾಗ ಮಣ್ಣಲ್ಲಿ ಮರಳಾಗಿ ಹೊಗುವ ನೀನು

ನಿನ್ನದು ಎನ್ನಲು ನಿನಗೇನಿದೆ,

ನಿನಗೆ ಜನ್ಮ ಕೊಟ್ಟವರು ಮತ್ತೊಬ್ಬರು,

ನಿನಗೆ ಹೆಸರು ಕೊಟ್ಟದ್ದು ಮತ್ತೊಬ್ಬರು,

ನಿನಗೆ ಜ್ಙಾನ ಹೇಳಿ ಕೊಟ್ಟದ್ದು ಮತ್ತೊಬ್ಬರು,

ಕಡೆಗೆ ನಿನ್ನ ಅಂತ್ಯ ಸಂಸ್ಕಾರ ನಿರ್ವಹಿಸುವುದು ಕೂಡಾ ಮತ್ತೊಬ್ಬರೇ...

ನಾನು ಎಂದು ಅಹಂಕರಿಸಲು ನಾನು ಯಾರು

ಏನಿದೇ ನನ್ನಲ್ಲಿ.

ಚಿಂತಿಸುವವನಿಗೆ ದೃಷ್ಟಾಂತವಿದೆ